ಅಥಣಿ :

ರಾಜ್ಯದ ಬಿಜೆಪಿ ಸರ್ಕಾರದಲ್ಲಿ ವೈಮನಸ್ಸು ಉಂಟಾಗಿದ್ದು, ಒಬ್ಬರೊಬ್ಬರಲಿ ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದ್ದು, ಶೀಘ್ರವೇ ೪೦ ಜನ ಶಾಸಕರು ಬಿಜೆಪಿ ತೊರೆದು ಕಾಂಗ್ರಸ್ ಸೇರಲಿದ್ದಾರೆ ಎಂದು ಮಾಜಿ ಶಾಸಕ ರಾಜು ಕಾಗೆ ಹೊಸ ಬಾಂಬ್ ಸಿಡಿಸಿದರು.

ಕಾಗವಾಡ ವಿಧಾನಸಭಾ ಮತಕ್ಷೇತ್ರದ ಮದಭಾವಿ ಗ್ರಾಮದಲ್ಲಿ ಅಕ್ಟೋಬರ್ ೨ ಗಾಂಧಿ ಜಯಂತಿಯ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ಕ್ರೀಕೇಟ್ ಕ್ಲಬ್ ಮದಭಾವಿ ಇವರ ವತಿಯಿಂದ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಜ್ಞಾನ ವಿಕಾಸ ಇವರ ಆಶ್ರಯದಲ್ಲಿ ಹಾಪ್ ಪೀಚ್ ಪುಲ್ ಗ್ರೌಂಡ್ ಕ್ರಿಕೇಟ್ ಪಂದ್ಯಾವಳಿಗಳನ್ನು ಹಮ್ಮಿಕೊಂಡಿದ್ದು, ಆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಲೂಟ್ ಇಂಡಿಯಾ, ಸೇಲ್ ಸರ್ಕಾರ ನಡಿತೀದೆ. ಗ್ಯಾಸ್,ಪೆಟ್ರೋಲ್, ದೀಸೇಲ್, ಬೇಳೆ ಕಾಳುಗಳು ಸೇರಿದಂತೆ ಜನಸಾಮಾನ್ಯರು ದಿನನಿತ್ಯ ಬಳಸುತ್ತಿರುವ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ಕೇಂದ್ರದ ಮೋದಿ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವರಿಗೆ ಭೇಟ್ಟಿಯಾಗಿ ಬಂದಿದ್ದೇನೆ, ಬರುವ ೨೦೨೩ ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು. ಮತ್ತೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆ. ನನಗೆ ಮತಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ತೊಡಗಲು ಹೇಳಿದ್ದಾರೆ, ಆ ವೇಳೆ ಶೀಘ್ರದಲ್ಲಿ ೪೦ ಜನ ಶಾಸಕರು ಬಿಜೆಪಿ ತೊರೆದು ಕಾಂಗ್ರೆಸ್  ಸೇರಲಿದ್ದಾರೆ ಎಂದು ಬಾಂಬ್ ಸಿಡಿಸಿದ ಅವರು ಮತಕ್ಷೇತ್ರದಲ್ಲಿ ಜನರು ಈ ಸರ್ಕಾರಕ್ಕೆ ಬೇಸತ್ತಿದ್ದು ನಾನು ಹೋದ ಕಡೆಯಲ್ಲಾ ಜನರು ವ್ಯಾಪಕ ಬೆಂಬಲ ವ್ಯಕ್ತ ಪಡಿಸುತ್ತಿರುವುದು ಕಂಡರೆ ರಾಜ್ಯದಲ್ಲಿ ಮತ್ತೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದರು.