ಉ.ಕ‌ ಸುದ್ದಿಜಾಲ ಕಾಗವಾಡ :

ವ್ಯಕ್ತಿಯೋರ್ವನನ್ನು ಕಬ್ಬಿನ ಗದ್ದೆಯಲ್ಲಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ನಡೆದಿದೆ. ಶೇಡಬಾಳದ ರಾವಸಾಹೇಬ್ ಪಾಟೀಲ್ ಅವರ ಕಬ್ಬಿನ ಗದ್ದೆಯಲ್ಲಿ ಕೊಲೆಯಾದ ವ್ಯಕ್ತಿಯನ್ನು ಶೇಡಬಾಳ ಗ್ರಾಮದ ಶಶಿಕಾಂತ್ ಕೃಷ್ಣಾ ಹೊನಕಾಂಬಳೆ (55) ಎಂದು ಗುರುತಿಸಲಾಗಿದೆ.

ಹಳೆಯ ದ್ವೇಷದ ಹಿನ್ನೆಲೆ ಶಶಿಕಾಂತನನ್ನು ಕೊಲೆ ಮಾಡಲಾಗಿದೆ ಎಂಬ ಸಂಶಯವನ್ನು ಶಶಿಕಾಂತ ಪುತ್ರ ರಾಹುಲ್ ವ್ಯಕ್ತಪಡಿಸಿದ್ದಾರೆ. ಮೃತರ ಶಶಿಕಾಂತ ಇಬ್ಬರು ಪುತ್ರರನ್ನು ಅಗಲಿದ್ದು, ಓರ್ವ ಸೇನೆಯಲ್ಲಿ ಯೋಧನಾಗಿದ್ದಾನೆ.

ತಂದೆಯ ಶವದ ಬಳಿ ಮಕ್ಕಳ ರೋಧನ ಮನಕಲಕುವಂತ್ತಿತ್ತು. ಸ್ಥಳಕ್ಕೆ ಕಾಗವಾಡ ಮತ್ತು ಅಥಣಿ ಪೊಲೀಸರು ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ.