ಉ.ಕ ಸುದ್ದಿಜಾಲ ಚಿಕ್ಕೋಡಿ :

ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.

ಮಾಜಿ ತಾಲೂಕು ಪಂಚಾಯತ ಸದಸ್ಯ ಹಾಗೂ ಕೈ ಮುಖಂಡ ರಾಜು ಪಾಟೀಲ್ ಮೇಲೆ ಖಾರದ ಪುಡಿ ಎರಚಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಮುಗಳಿ ಗ್ರಾಮದ ಬಸ್‌ ನಿಲ್ದಾಣದ ಬಳಿ ರಾತ್ರಿ ದಾಳಿ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಹಲ್ಲೆಯಿಂದ ಕೈ ಬೆರಳುಗಳು ಕಟ್ ತಲೆಗೆ ಗಂಭೀರ ಗಾಯಗಳಾಗಿದ್ದು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವೈಯಕ್ತಿಕ ಜಗಳ ಹಿನ್ನಲೆಯಲ್ಲಿ ಮುಗಳಿ ಗ್ರಾಮದ ಹೆಡ್ ಮಾಸ್ಟರ್ ಹಾಗೂ ಆತನ ಪುತ್ರನಿಂದ ಹಲ್ಲೆ ಮಾಡಿರುವ ಮಾಹಿತಿಯನ್ನ ಪೊಲೀಸರು ನೀಡಿದ್ದಾರೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.