ಉ.ಕ ಸುದ್ದಿಜಾಲ ಬೆಳಗಾವಿ :

‘ವಾಲ್ಮೀಕಿ ಸಮುದಾಯಕ್ಕೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿ ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.

ಬೆಳಗಾವಿ ನಗರದಲ್ಲಿ ಭಾನುವಾರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಗಳಿಗೆ ಮತದಾನ ನಡೆದಿತ್ತು. ತಮ್ಮ ಬೆಂಬಲಿಗರೊಂದಿಗೆ ಮಾತನಾಡುತ್ತಿದ್ದ ರಮೇಶ ಕತ್ತಿ ಅವರು, ಜಾರಕಿಹೊಳಿ ಸಹೋದರರನ್ನು ಟೀಕಿಸುವ ಭರದಲ್ಲಿ ಇಡೀ ವಾಲ್ಮೀಕಿ ಸಮುದಾಯಕ್ಕೆ ಅವಾಚ್ಯ ಪದ ಬಳಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.