ಉ.ಕ ಸುದ್ದಿಜಾಲ ಚಿಕ್ಕೋಡಿ :

ಮುರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಆಟ ಆಟವಾಡುತ್ತಿದ್ದ ಶಾಲಾ ವಿದ್ಯಾರ್ಥಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಪರವಲಯದಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ‌ನಡೆದಿದೆ.

ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಕೃಷ್ಣಾ ಮಂಜುನಾಥ ಹೆಗಡೆ ಸಾವನಪ್ಪಿದ್ದು, ಮೂಲತಹಃ ನವಲಿಹಾಳ ಗ್ರಾಮದ ವಿದ್ಯಾರ್ಥಿ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಮಧ್ಯಾಹ್ನ ಊಟದ ಬಿಡುವಿನ ಸಮಯದಲ್ಲಿ ಘಟನೆ ‌ಸಂಭವಿಸಿದ್ದು.

ಕ್ರಿಕೆಟ್ ಆಟವಾಡುತ್ತಿದ್ದ ವಿದ್ಯಾರ್ಥಿ ಕೃಷ್ಣ ಚಂಡನ್ನು ಮೈದಾನದ ಹೊರಗಡೆಯಿಂದ ತರುವ ಸಂದರ್ಭದಲ್ಲಿ ಆವರಣದಲ್ಲಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದು ಸದಲಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.