ಉ.ಕ ಸುದ್ದಿಜಾಲ ಚಿಕ್ಕೋಡಿ :

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ! ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹತ್ತರವಾಟ ಗ್ರಾಮದ ಯುವಕ ಕಿರಣ ಸಣ್ಣಪ್ಪ ಕಮತೆ (29) ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 53ನೇ ರಾಂಕ್ ಹಾಗೂ ರಾಜ್ಯಕ್ಕೆ ಮೊದಲ ರ್ಯಾಂಕ್

ಬೆಳಗಾವಿ ಗೋಗಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್‌ ಎಂಜಿನಿಯರಿಂಗ್‌ ಪದವಿ ಪಡೆದಿರುವ ಕಿರಣ, ಸದ್ಯ ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಮುಖ್ಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದಾರೆ. ಐದು ಬಾರಿ ಪ್ರಿಲಿಮ್ಸ್ ಪಾಸಾಗಿದ್ದರೂ ಮೇನ್ಸ್ ಪರೀಕ್ಷೆಯಲ್ಲಿ ವಿಫಲವಾಗಿದ್ದರು. ಆರನೇ ಬಾರಿಗೆ ಯಶಸ್ಸು ಕಂಡ ಕಿರಣ

ಕಿರಣ ತಂದೆ ಸಣ್ಣಪ್ಪ ಕಮತೆ ಅವರು ನಿಡಸೋಸಿಯ ಹಿರಾ ಶುಗರ್ಸ್ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಾಚಾರ್ಯ ತಾಯಿ ರುಕ್ಕಿಣಿ ಗೃಹಿಣಿ. ಸಹೋದರಿ ಕೀರ್ತಿ ಬೆಂಗಳೂರಿನಲ್ಲಿ ಆರ್ಕಿಟೆಕ್ಟರ್ ಆಗಿದ್ದಾರೆ.

ಕಿರಣ 1, 2ನೇ ತರಗತಿಯನ್ನು ಮಹಾರಾರಾಷ್ಟ್ರದ ಅಂಬೆಜೋಗಾಯಿ ಮರಾಠಿ ಪ್ರಾಥಮಿಕ ಶಾಲೆ, 3ರಿಂದ 8ನೇ ತರಗತಿಯನ್ನು ಹುಬ್ಬಳ್ಳಿಯ ಎಂ.ಆ‌ರ್.ಸಾಖರೆ ಆಂಗ್ಲ ಮಾಧ್ಯಮ ಶಾಲೆ, 9, 10ನೇ ತರಗತಿ ಗದಗ ಕೆಎಲ್‌ಇ ಸಂಸ್ಥೆಯ ಆಂಗ್ಲ ಮಾಧ್ಯಮ ಶಾಲೆ ಪಿಯು ಶಿಕ್ಷಣವನ್ನು ನಿಪ್ಪಾಣಿಯ ಜಿ.ಐ.ಬಾಗೇವಾಡಿ ಕಾಲೇಜಿನಲ್ಲಿ ಮುಗಿಸಿದ್ದಾರೆ.