ಉ.ಕ ಸುದ್ದಿಜಾಲ ಅಥಣಿ :
ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡಿಯುವ ನೀರಿಗಾಗಿ ಜನರು ಪರದಾಡುವಂತಾಗಿದೆ. ಬೆಳೆಗಳು ಒಣಗುವ ಆತಂಕ ಎದುರಾಗಿದ್ದು, ಎಂದು ರೈತರು ದೂರಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸಂಬರಗಿ ಗ್ರಾಮದ ರೈತರಿಗೆ ಕಳೆದ 8-10 ದಿನಗಳಿಂದ ಸಮರ್ಪಕ ವಿದ್ಯುತ್ ಇಲ್ಲದೆ ಕುಡಿಯುವ ನೀರಿಗಾಗಿ ಪರದಾಟ ಅನುಭವಿಸುವಂತಾಗಿದೆ.
ಕಳೆದು ಎಂಟತ್ತು ದಿನಗಳಿಂದ ಸರಿಯಾದ ವಿದ್ಯುತ್ ಸಂಪರ್ಕ ಸಿಗುತ್ತಿಲ್ಲ ಎಂದು ಹೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿದ್ರೆ ಅಧಿಕಾರಿಗಳು ರೈತರ ಕರೆಗಳನ್ನೂ ಸ್ವಿಕರಿಸದೇ ನೋ ರೆಸ್ಪಾನ್ಸ್ ಆಗಿದ್ದಾರೆ. ಇತ್ತ ಸ್ಥಳಿಯ ಲೈನ್ ಮನ್ ಳಿಗೆ ರೈತರು ಕರೆ ಮಾಡಿ ವಿದ್ಯುತ್ ಸಮಸ್ಯೆ ಬಗ್ಗೆ ಹೇಳಿದ್ರೆ ನನಗೆ ಕೆಲಸ ಮಾಡಲು ಆಗೋದಿಲ್ಲ ಎಂದು ಉಡಾಫೆ ಉತ್ತರ ನೀಡುತ್ತಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸಂಬರಗಿ ಗ್ರಾಮದಲ್ಲಿ ಕಂಟಿಬೇಲಿ ಬೆಳೆದು ವಿದ್ಯುತ್ ತಂತಿಗಳು ಒಂದಕ್ಕೊಂದು ಕೂಡಿ ಸಮಸ್ಯೆಯಾದ್ರೂ ಅಧಿಕಾರಿಗಳು ಮಾತ್ರ ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲದ ರೀತಿ ವರ್ತನೆ ತೋರುತ್ತಿದ್ದಾರೆ.
ಬೆಳಿಗ್ಗೆಯಿಂದಲೂ ಸಾಯಂಕಾಲದ ವರೆಗೆ ಕೇಂದ್ರದಲ್ಲಿ ಲೋಡ್ ಶೆಡ್ಡಿಂಗ್ ಹೆಚ್ಚಾಗಿದ್ದು, ಗ್ರಾಮಕ್ಕೆ ವಿದ್ಯುತ್ ವಿತರಣೆ ಮಾಡುವುವಲ್ಲಿ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಸಮರ್ಪಕ ವಿದ್ಯುತ್ ಸಿಗದೇ ಇರುವುದರಿಂದ ರೈತರಿಗೆ ಆಗುತ್ತಿರುವ ಅನಾನುಕೂಲತೆ ಸರಿಪಡಿಸಿ, ಮೇಲಾಧಿಕಾರಿಗಳ ಜೊತೆ ಚರ್ಚಿಸಿ ವಿದ್ಯುತ್ ವಿತರಣೆಯಲ್ಲಿ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ.
ವಿದ್ಯುತ್ ಸಮಸ್ಯೆ, ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ.! ಕುಡಿಯುವ ನೀರಿಗೆ ಪರದಾಟ
