ಉ.ಕ ಸುದ್ದಿಜಾಲ ಬೆಳಗಾವಿ :
ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಜನ್ಮದಿನದಂದೇ ನೇಣಿಗೆ ಶರಣಾದ ಬಿಎಸ್ಸಿ ವಿದ್ಯಾರ್ಥಿನಿ ಬೆಳಗಾವಿ ನಗರದ ಅಜಂ ನಗರದ ಹಾಸ್ಟೆಲ್ ನಲ್ಲಿ ಘಟನೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಟಾಬಳ್ಳಿ ಗ್ರಾಮದ ಕಾವೇರಿ ಉಮೇಶ ನಾಯಕ( 21), ಬಿಎಸ್ ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಮೂರು ತಿಂಗಳ ಹಿಂದಷ್ಟೇ ಎಂಗೆಜ್ಮೆಂಟ್ ಮಾಡಿಕೊಂಡಿದ್ದ ವಿದ್ಯಾರ್ಥಿನಿ.
ಪೊಲೀಸ ಪೇದೆಯೊಂದಿಗೆ ಮದುವೆ ನಿಶ್ಚಯ ಮಾಡಿದ್ದ ಕುಟುಂಬಸ್ಥರು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ನಂತರದ ಬಾಲಕಿಯರು ವಸತಿ ನಿಲಯದಲ್ಲಿ ಆತ್ಮಹತ್ಯೆ. ಮಗಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ.
ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸ ಸಿಪಿಐ ಉಸ್ಮಾನ್ ಆವಟಿ, ಸಿಬ್ಬಂದಿಗಳು ಆಗಮನ ಎಪಿಎಂಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

