ಉ.ಕ ಸುದ್ದಿಜಾಲ ಗದಗ :

ಪತ್ನಿಯಿಂದಲೇ ಪತಿಯ ಭೀಕರ ಹತ್ಯೆ. ಬೆಡ್ ರೂಮನಲ್ಲಿ ಗಂಡನಿಗೆ ಚಟ್ಟ ಕಟ್ಟಿದ ಹೆಂಡತಿ. ಕಬ್ಬಿಣದ ಸಲಾಕೆಯಿಂದ ಹೊಡೆದು ಪತಿ ಕೊಲೆ. ಗದಗ ಜಿಲ್ಲೆ ನರಗುಂದ ತಾಲೂಕಿನ ರಡ್ಡೇರ ನಾಗನೂರಲ್ಲಿ ಘಟನೆ..!

ವಿಶ್ವನಾಥ ಹಾದಿಮನಿ (29) ಕೊಲೆಯಾದ ದುರ್ದೈವಿ. ಪತ್ನಿ ಕವಿತಾಳಿಂದ ಪತಿಯ ಕೊಲೆ…! ಪತ್ನಿ ಕವಿತಾಳನ್ನು ವಶಕ್ಕೆ ಪಡೆದ ಪೊಲೀಸರು..! ದಾಂಪತ್ಯ ಕಲಹವೇ ಕೊಲೆಗೆ ಕಾರಣ ಎನ್ನುವ ಶಂಕೆ..!

2022 ರಲ್ಲಿ ಪ್ರೀತಿಸಿ ಮದುವೆಯಾಗಿದ್ದ ದಂಪತಿ..! 15 ದಿನಗಳ ಹಿಂದಷ್ಟೇ ಗಂಡನ ಮನೆಗೆ ಬಂದಿದ್ದ ಪತ್ನಿ. ಮದುವೆಯಾದಗಿನಿಂದಲೂ ಇಬ್ಬರ ನಡುವೆ ವೈಮನಸ್ಸು. ನಿನ್ನೆ ರಾತ್ರಿ ಜಗಳ ಕೊಲೆಯಲ್ಲಿ ಅಂತ್ಯ..!

ಇಂದು ಮಧ್ಯಾಹ್ನ ಘಟನೆ ಬೆಳಕಿಗೆ. ಪತ್ನಿ ಕವಿತಾಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.