ಉ.ಕ ಸುದ್ದಿಜಾಲ ಅಥಣಿ :

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಮಿರಜ್‌ನ ಸ್ಪಂದನ್ ಆಸ್ಪತ್ರೆ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಮಹಾ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.

ಆಗಸ್ಟ್‌ 9, 2026ರಂದು (ಭಾನುವಾರ) ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ವಿವಿಧ ಕಾಯಿಲೆಗಳ ಉಚಿತ ತಪಾಸಣೆ ಹಾಗೂ ತಜ್ಞ ವೈದ್ಯರಿಂದ ಸಲಹೆ ನೀಡಲಾಗುತ್ತದೆ.

ಶಿಬಿರದಲ್ಲಿ ಹೃದಯ ರೋಗ, ರಕ್ತ ಪರೀಕ್ಷೆ, ಅಸ್ತಮಾ, ರಕ್ತದೊತ್ತಡ (ಬಿಪಿ), ಮಧುಮೇಹ (ಶುಗರ್), ಕಿಡ್ನಿ ಹಾಗೂ ಮೂತ್ರಪಿಂಡ ಸಂಬಂಧಿತ ಕಾಯಿಲೆಗಳು, ರಕ್ತ ಕ್ಯಾನ್ಸರ್ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ತಪಾಸಣೆ ಉಚಿತವಾಗಿ ನಡೆಯಲಿದೆ.

ಇದಲ್ಲದೆ ಹೃದಯ ಶಸ್ತ್ರಚಿಕಿತ್ಸೆ, ಎಲುಬು ಮತ್ತು ಕೀಲು ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಸಂಬಂಧಿತ ಶಸ್ತ್ರಚಿಕಿತ್ಸೆಗಳ ಕುರಿತು ತಜ್ಞ ವೈದ್ಯರಿಂದ ಮಾರ್ಗದರ್ಶನ ನೀಡಲಾಗುವುದು. ಅರ್ಹ ರೋಗಿಗಳಿಗೆ ಉಚಿತ ಚಿಕಿತ್ಸೆಯೊಂದಿಗೆ ಅಗತ್ಯವಿರುವವರಿಗೆ ಉಚಿತ ಔಷಧಿಗಳನ್ನೂ ವಿತರಿಸಲಾಗುತ್ತದೆ.

ಗ್ರಾಮೀಣ ಭಾಗದ ಜನರು ಈ ಅಪರೂಪದ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಬರಗಿ ಗ್ರಾಮದ ಮೋರಯಾ ಯುವಶಕ್ತಿ ಬಳಗ ಹಾಗೂ ಸಾಮಾಜಿಕ ಕಾರ್ಯಕರ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.