ಉ.ಕ ಸುದ್ದಿಜಾಲ ವಿಜಯನಗರ :

ಇಂದು ಕೆಲಸಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ ಆರೋಗ್ಯ ಸಚಿವರು – ಸೇವೆಗೆ ಹಾಜರಾಗದಿದ್ದರೆ ಆರೋಗ್ಯ ಇಲಾಖೆ ನಡೆಸಲು ನಮಗೆ ಗೊತ್ತಿದೆ ಎಂದ ಖಾದರ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಇಂದು ಸಂಜೆ ಮುಖ್ಯಮಂತ್ರಿ ಅವರು ಆರ್ಥಿಕ ಇಲಾಖೆಯೊಂದಿಗೆ ಚರ್ಚೆ ನಡೆಸಲಿದ್ದಾರೆ. ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ. ಮುಖ್ಯಮಂತ್ರಿಗಳು ಅವರ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದರು.

ಇಂದು ಬಹುತೇಕ ಆಶಾ ಕಾರ್ಯಕರ್ತೆಯರು ಸರ್ಕಾರದ ಮನವಿಗೆ ಒಪ್ಪಿ ತಮ್ಮ ಕರ್ತವ್ಯಕ್ಕೆ ಮರಳಲಿದ್ದಾರೆ ಎಂಬ ವಿಶ್ವಾಸವನ್ನೂ ಸಚಿವ ಯು.ಟಿ. ಖಾದರ್ ವ್ಯಕ್ತಪಡಿಸಿದರು.

ಒಂದು ವೇಳೆ ಆಶಾ ಕಾರ್ಯಕರ್ತೆಯರು ಸೇವೆಗೆ ಮರಳದಿದ್ದರೆ ಆರೋಗ್ಯ ಇಲಾಖೆಯನ್ನು ಹೇಗೆ ಮುನ್ನಡೆಸಬೇಕು ಎಂಬುದು ನಮಗೆ ಗೊತ್ತಿದೆ. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆರೋಗ್ಯ ಇಲಾಖೆಯ ಸೇವೆಗಳನ್ನು ಮುಂದುವರಿಸಲಾಗುವುದು ಎಂದು ಖಡಕ್ ಸಂದೇಶ ನೀಡಿದರು.