ಕಾಗವಾಡ :
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣ ಪಂಚಾಯತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಅಧಿಕಾರಿಗಳ ಬೆಜವಾಬ್ದಾರಿ ತನದಿಂದ ಅಪ್ರಾಪ್ತ ಬಾಲಕರನ್ನು ಚುನಾವಣೆ ಕಾರ್ಯಕ್ಕೆ ಬಳಕೆ ಮಾಡಿಕೊಂಡ ಘಟನೆ ನಡೆದಿದೆ.
ಹಿರಿಯ ನಾಗರಿಕರಿಗೆ ಹಾಗೂ ವಿಶೇಷ ಚೇತನರಿಗೆ ಅಂತ ಮತದಾನ ಮಾಡಲು ಸರಕಾರ ವೀಲ್ ಚೇರ್ ವ್ಯವಸ್ಥೆ ಮಾಡಿದ್ದು ಅದರ ಕಾರ್ಯನಿರ್ವಹಿಸಲು ಸಿಬ್ಬಂದಿ ನಿಯೋಜನೆ ಮಾಡದೆ ಮಕ್ಕಳ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದೆ.