ಉ.ಕ ಸುದ್ದಿಜಾಲ ಅಥಣಿ :
ಅಥಣಿಯಲ್ಲಿ ಕೊಲೆ ಮಾಡಿರುವ ಸ್ಥಿತಿಯಲ್ಲಿ ಶವ ಪತ್ತೆ. ಅನಂತಪುರ ಗ್ರಾಮದ ಹೊರವಲಯದ ಚೆನ್ನಮ್ಮ ಸರ್ಕಲ್ ಬಳಿಯ ಬಸ್ ನಿಲ್ದಾಣದಲ್ಲಿ ಶವ ಪತ್ತೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದ ನಿವಾಸಿ ಅಪ್ಪಾಸಾಹೇಬ್ ಸಿದ್ದಪ್ಪ ಕಾಂಬಳೆ(37) ಮೃತ ದುರ್ದೈವಿ. ಅಪ್ಪಾಸಾಹೇಬ್ ಕೂಲಿ ಕೆಲಸಕ್ಕೆಂದು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ.
ನಿನ್ನೆ ರಾತ್ರಿ ತನ್ನ ಪತ್ನಿಗೆ ಕರೆ ಮಾಡಿ, ಮಷೀನ್ ರಿಪೇರಿ ಇದೆ. ಇವತ್ತು ಊರಿಗೆ ಬರಲು ಆಗುವುದಿಲ್ಲ ಎಂದು ತಿಳಿಸಿದ್ದ ಅಪ್ಪಾಸಾಹೇಬ್. ಇಂದು ಬೆಳಗ್ಗೆ ಬಸ್ ನಿಲ್ದಾಣದಲ್ಲಿ ಅಪ್ಪಾಸಾಹೇಬ್ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ, ಪರಿಶೀಲನೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.