ಉ.ಕ ಸುದ್ದಿಜಾಲ ಅಥಣಿ :

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ವಾರ್ಡ್ ನಂ.25 ರ ಆಜಾದ್ ನಗರದ ನಿವಾಸಿಗಳು ಕಳೆದ 15 ವರ್ಷಗಳಿಂದ ರಸ್ತೆ, ಚರಂಡಿ, ವಿದ್ಯುತ್‌ ಮುಂತಾದ ಮೂಲಭೂತ ಸೌಕರ್ಯಗಳ ಕೊರತೆಯಿಂದ ತೀವ್ರ ನರಕಯಾತನೆ ಅನುಭವಿಸುತ್ತಿದ್ದಾರೆ. .

ಅನೇಕ ಬಾರಿ ಚುನಾಯಿತ ಪ್ರತಿನಿಧಿಗಳು ಮತ್ತು ಪುರಸಭೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸಮಸ್ಯೆ ಬಗೆಹರಿಯದೇ ಇದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಳೆಯಿಂದ ರಸ್ತೆ ಸಂಪೂರ್ಣ ಕೆಸರುಮಯವಾಗಿ ಮಾರ್ಪಟ್ಟಿದ್ದು, ಮಕ್ಕಳು ಶಾಲೆಗೆ ಹೋಗಲು ಪರದಾಡುವಂತಾಗಿದೆ.

ವೃದ್ಧರು ಸಂಚಾರಕ್ಕೆ ಹಿಂಸೆ ಅನುಭವಿಸುತ್ತಿದ್ದಾರೆ. ವಿದ್ಯುತ್ ದೀಪಗಳು ಸಹ ಕಾರ್ಯನಿರ್ವಹಿಸದ ಕಾರಣ ರಾತ್ರಿ ವೇಳೆಯಲ್ಲಿ ಸಮಸ್ಯೆ ಎದುರಿಸುವಂತಾಗಿದೆ. ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ನೀರು ನಿಂತು ಎಲ್ಲರಿಗೂ ಆರೋಗ್ಯದ ಆತಂಕ ಎದುರಾಗಿದೆ.

ಭರವಸೆ ನೀಡಿದ್ದ ಅಧಿಕಾರಿಗಳು ಜಾಣ ಕುರುಡರಂತಿರೋದು. ಸ್ಥಳೀಯರ ಕೆಂಗಣ್ಣಿಗೆ ಕಾರಣವಾಗಿದ್ದು ಮಕ್ಕಳು ಅಥಣಿ ಪುರಸಭೆ ನಿರ್ಲಕ್ಷ ಧೋರಣೆ ವಿರುದ್ಧ ಫಲಕ ಬಿತ್ತರಿಸುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.