ಉ.ಕ ಸುದ್ದಿಜಾಲ ಅಥಣಿ :
ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ನನ್ನ ಬೆಂಬಲವಿದೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಬಗ್ಗೆ ಅಥಣಿ ಶಾಸಕ ಲಕ್ಷ್ಮಣ ಸವದಿ ಮಾತು
ಚಳಿಗಾಲದ ಅಧಿವೇಶನದಲ್ಲಿ ನಡೆಯಲಿರುವ ಪಂಚಮಸಾಲಿ 2ಎ ಮೀಸಲಾತಿ ಬೃಹತ್ ಹೋರಾಟ. ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುವೆ ಎಂದು ಹೇಳಿಕೆ ನೀಡಿದ್ದು, ಪಂಚಮಸಾಲಿ ಮಿಸಲಾತಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಹೇಳಿಕೆ ನೀಡಿರುವ ಬೆನ್ನಲ್ಲೇ.
ಅಥಣಿ ಪಟ್ಟಣದಲ್ಲಿ ಪಂಚಮಸಾಲಿ ಸಮಾಜದ ಮುಖಂಡರಿಂದ ಲಕ್ಷ್ಮಣ ಸವದಿಗೆ ಭೇಟಿ ಮಾಡಿ ಮನವಿ ಮಾಡಿದ್ದಾರೆ. ಪಂಚಮಸಾಲಿ ಸಮಾಜದ ಋಣ ನನ್ನ ಮೇಲಿದೆ. ಅದನ್ನು ತೀರಿಸುವ ಪ್ರಯತ್ನ ಮಾಡುವೆ. ಪಂಚಮಸಾಲಿ 2ಎ ಮಿಸಲಾತಿಗೆ ನನ್ನ ಬೆಂಬಲವಿದೆ.
ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮುಖಂಡರಿಗೆ ಭರವಸೆ ನೀಡದ ಕೈ ಶಾಸಕ. ಅಧಿವೇಶನದಲ್ಲಿ ಸಮಯ ಸಿಕ್ಕಾಗ ನಾನು ಪಂಚಮಸಾಲಿ 2ಎ ಮೀಸಲಾತಿ ಬಗ್ಗೆ ಧ್ವನಿ ಎತ್ತುವೆ.
ಈ ಕುರಿತು ಸಿಎಂ ಸಿದ್ದರಾಮಯ್ಯರಿಗೂ ಸಹ ಮನವರಿಕೆ ಮಾಡತ್ತಿನಿ. ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಪರ ಬ್ಯಾಟ್ ಬಿಸಿದ ಅಥಣಿ ಶಾಸಕ ಲಕ್ಷ್ಮಣ ಸವದಿ.