ಉ.ಕ ಸುದ್ದಿಜಾಲ ಅಥಣಿ :

ಕಳೆದ ಎರಡು ತಿಂಗಳಿಂದ ಅನಾರೋಗ್ಯದ ಕಾರಣ ರಜೆಯಲ್ಲಿದ್ದ ಪೊಲೀಸ್ ಪೇದೆ ಇಂದು ಆಕಸ್ಮಿಕವಾಗಿ ಹೃದಯಾಘಾತದಿಂದ ಸಾವಿಗಿಡಾಗಿದ್ದಾರೆ.

ಪೇದೆ ರುದ್ರಪ್ಪ ರಾಮು ವಾಘಮೋರೆ (52) ಮೃತ ದುರ್ದೈವಿಯಾಗಿದ್ದು ಕಳೆದ 20  ವರ್ಷಗಳಿಂದ ಪೊಲೀಸ್ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಅಥಣಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೂರು ತಿಂಗಳಿಂದ ಆಗಾಗ ಸಣ್ಣ ಪುಟ್ಟ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಕಳೆದ ಎರಡು ತಿಂಗಳಿಂದ ತಾತ್ಕಾಲಿಕ ರಜೆ ಪಡೆದ ಪೇದೆ ರುದ್ರಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ವಿಶ್ರಾಂತಿ ಪಡೆಯುತ್ತಿದ್ದರು  ಶನಿವಾರ ಬೆಳಿಗ್ಗೆ ಆಕಸ್ಮಿಕವಾಗಿ ತಲೆ ಹಾಗೂ ಎದೆ ನೋವು ಕಾಣಿಸಿಕೊಂಡಿದೆ ತಕ್ಷಣ ಚಿಕಿತ್ಸೆಗಾಗಿ ಬೆಳಗಾವಿ ಕೆ ಎಲ್ ಇ ಆಸ್ಪತ್ರೆಗೆ ಸಾಗಿಸಿದ್ದಾರೆ.

ಚಿಕಿತ್ಸೆ ಫಲಕಾರಿಯಾಗದೆ ಪೇದೆ ಮೃತ ಪಟ್ಟಿದ್ದು ಸಂಜೆ ಹುಟ್ಟುರಾದ ಕಲ್ಲೂತ್ತಿ ಗ್ರಾಮದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗಿಯಾಗಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಕ್ರಿಯೆ ನೆರವೇರಿಸಲಾಯಿತು. ಮೃತ ಪೇದೆ ರುದ್ರಪ್ಪ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.