ಉ.ಕ ಸುದ್ದಿಜಾಲ ಅಥಣಿ :
ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ ಆಗ್ರಹ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಆಗಬೇಕು. ಅಥಣಿಯಲ್ಲಿ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಆಗಬೇಕು : ಲಕ್ಷ್ಮಣ ಸವದಿ
76 ನೇ ಗಣರಾಜ್ಯೋತ್ಸವ ಆಚರಣೆ ಭಾಷಣದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ ಕೈ ಶಾಸಕ. ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡಿ 5 ಸಾವಿರ ಕೋಟಿ ಹಣ ಮೀಸಲಿಡಬೇಕು. ಪ್ರತಿ ಜಿಲ್ಲೆಗೆ ವಿಶೇಷ ಅನುದಾನ ನೀಡಬೇಕು ಎಂದು ಆಗ್ರಹಿಸಿದ ಕೈ ಶಾಸಕ.
ಈಗಾಗಲೇ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ. ಬಜೆಟ್ ಮಂಡನೆ ಸಮಯದಲ್ಲಿ ಮತ್ತೊಮ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.