ಉ.ಕ ಸುದ್ದಿಜಾಲ ಅಥಣಿ :
ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.
ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ದುರ್ದೈವಿ. ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿದೆ.
ಕೂಡಲೇ ಶಿಕ್ಷಕರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.