ಉ.ಕ ಸುದ್ದಿಜಾಲ ಅಥಣಿ :

ರೈತರ ಪರ ಯಾವುದೇ ಯೋಜನೆಗಳು ಬರ್ತಿಲ್ಲ. ರೈತರು ಬದುಕು ನಡೆಸುವುದು ದುಸ್ತರವಾಗಿದೆ. ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದ ಕೈ ಶಾಸಕ ರಾಜು ಕಾಗೆ.

ತಮ್ಮದೇ ಸರ್ಕಾರದ ವಿರುದ್ಧ ಹರಿಹಾಯ್ದ ಕೈ ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ತಾವಂಶಿ ಗ್ರಾಮದಲ್ಲಿ ಹೇಳಿಕೆ ನೀಡಿದ್ದು ಟಕಾಗವಾಡ ವಿಧಾನಸಭೆ ಕ್ಷೇತ್ರದ ಶಾಸಕ ರಾಜು ಕಾಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರೈತರು ಒಂದು ವರ್ಷ ಬೆಳೆಗಳನ್ನು ಬೆಳೆಯುವುದನ್ನು ಬಿಟ್ಟರೇ ನೀವೇನು ತಿಂತಿರೀ..?

ನಿಮ್ಮ ಬಳಿ ರೊಕ್ಕ, ಬಂಗಾರ ಬೆಳ್ಳಿ ಸಾಕಷ್ಟು ಇರಬಹುದು, ಆದ್ರೆ ಅದನ್ನ ತಿನ್ನೋಕಾಗುತ್ತಾ..? ಮೊದಲು ರೈತರನ್ನು ಬದುಕಿಸುವ ಕೆಲಸ ಮಾಡಿ. ರೈತರು ಬದುಕಿದ್ರೆ ಮಾತ್ರ ಈ ದೇಶ ಪ್ರಗತಿ ಹೊಂದಲು ಸಾಧ್ಯವಿದೆ.

ಕಳೆದ ಒಂದು ವರ್ಷದಿಂದ ನನ್ನ ಗೋಳನ್ನು ಸರ್ಕಾರ ಆಲಿಸುತ್ತಿಲ್ಲ. ಹೀಗೆ ಪರಿಸ್ಥಿತಿ ಮುಂದುವರೆದ್ರೆ ವಿಧಾನಸೌಧದಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಓರ್ವ ಮಂತ್ರಿಗೆ ಹೇಳಿದೆ. ನಿನ್ಯಾಕೆ ಆತ್ಮಹತ್ಯೆ ಮಾಡಿಕೊಳ್ತಿಯಾ, ನಿನ್ನ ಕೆಲಸ ಮಾಡ್ತಿವಿ ಅಂತ ಹೇಳಿದ ಮಂತ್ರಿಗಳಿದ್ದಾರೆ.

ಅನುದಾನ ನೀಡದ ಸ್ವಪಕ್ಷೀಯ ಸಚಿವರ ವಿರುದ್ಧ ರಾಜು ಕಾಗೆ ಗರಂ ಆಗಿದ್ದಾರೆ.