ಉ.ಕ ಸುದ್ದಿಜಾಲ ಅಥಣಿ :

ಕಳೆದ ನಾಲ್ಕೈದು ದಿನದ ಹಿಂದೆ ಪ್ರವಾಸಕ್ಕೆಂದು ತೆರಳಿದ್ದ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಕೊಂಡು ಮರಳಿ ಊರಿಗೆ ಊರಿಗೆ ತೆರಳುವಾಗ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕಡಪ ಚಿತ್ತೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.

ಟ್ರಕ್ ಹಾಗೂ ಕ್ರೂಸರ್ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಐವರು ಸ್ಥಳದಲ್ಲೇ ಸಾವು. ಇಬ್ಬರ ಸ್ಥಿತಿ ಗಂಭೀರವಾಗಿದೆ‌.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಡಚಿ ಗ್ರಾಮದ ನಿವಾಸಿಗಳು ಮೃತರನ್ನು ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದ ಆಜೂರ (32), ಹನುಮಂತ ಆಜೂರ (42),  ಚಾಲಕ ಹನುಮಂತ ಜಾದವ್ (32) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಕಳೆದ ನಾಲ್ಕೈದು ದಿನದ ಹಿಂದೆ ಪ್ರವಾಸಕ್ಕೆಂದು ತೆರಳಿದ್ದ ಕುಟುಂಬಸ್ಥರು. ಗಂಭೀರ ಗಾಯಗೊಂಡವರನ್ನ ಸಮೀಪ ಆಸ್ಪತ್ರೆಗೆ ದಾಖಲಿಸಲಾಗಿದೆ.