ಉ.ಕ‌ ಸುದ್ದಿಜಾಲ‌ ಅಥಣಿ :

ನಾಳೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕ್ಷೇತ್ರ ಅಥಣಿಗೆ ಸಿಎಂ, ಡಿಸಿಎಂ, ಸಚಿವರ ಆಗಮಿಸಲಿದ್ದಾರೆ. ಅಥಣಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಜೊತೆಗೆ ಕೊಕಟನೂರ ಗ್ರಾಮದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.

80 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಅಡಿಗಲ್ಲು ಸಮಾರಂಭ ನೆರವೆರಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ, ಡಿಸಿಎಂ ಡಿ ಕೆ ಶಿವಕುಮಾರ ಲೋಕೊಪಯೋಗಿ ಸಚಿವ ಸತೀಶ ಜಾರಕಿಹೋಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಚಿವ ರಾಮಲಿಂಗಾರೆಡ್ಡಿ, ಎಚ್ ಸಿ ಮಹದೇವಪ್ಪ, ಪ್ರಿಯಾಂಕ ಖರ್ಗೆ, ಕೆ ವೆಂಕಟೇಶ, ಎಸ್ ಎಸ್ ಬೋಸ್‌ರಾಜ್ ಅಥಣಿ ಶಾಸಕ‌ ಲಕ್ಷ್ಮಣ ಸವದಿ, ಕಾಗವಾಡ ಶಾಸಕ ರಾಜು‌ಕಾಗೆ ಸಾಥ್ ನೀಡಲಿದ್ದಾರೆ.

ನಾಳೆ ಬೆಳಗ್ಗೆ 11.15ಕ್ಕೆ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ಗೆ ಆಗಮಿಸುವ ಸಿಎಂ ವಿಶೇಷ ವಿಮಾನದಲ್ಲಿ ಬೆಂಗಳೂರಿಂದ ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಿಂದ ಹೆಲಿಕಾಪ್ಟರ್ ಮೂಲಕ ಅಥಣಿಗೆ ಪ್ರಯಾಣ ಮಾಡಲಿದ್ದಾರೆ.

ನಾಳೆ ಮಧ್ಯಾಹ್ನ 12ಕ್ಕೆ ಅಥಣಿಯ ಕೆಎಲ್‌ಇ ಕಾಲೇಜು ಹೆಲಿಪ್ಯಾಡ್‌ಗೆ ಆಗಮನ ಮಧ್ಯಾಹ್ನ 12.30ಕ್ಕೆ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರ ಪ್ರತಿಮೆ ಲೋಕಾರ್ಪಣೆ ಮಾಡಲಿರುವ ಸಿಎಂ ಸಿದ್ದರಾಮಯ್ಯ.

ಬಳಿಕ ಅಥಣಿಯಿಂದ ಕೊಕಟನೂರ ಗ್ರಾಮಕ್ಕೆ ತೆರಳುವ ಸಿಎಂ ನಾಳೆ ಮಧ್ಯಾಹ್ನ 12.50ಕ್ಕೆ ಕೊಕಟನೂರು ಗ್ರಾಮದಲ್ಲಿ ಅದ್ಧೂರಿ ಸಮಾರಂಭದಲ್ಲಿ ಭಾಗಿ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಸಮಾರಂಭ ಸಂಜೆ 4.30ಕ್ಕೆ ಕೊಕಟನೂರಿಂದ ಹೆಲಿಕಾಪ್ಟರ್ ಮೂಲಕ ಸಾಂಬ್ರಾ ಏರ್‌ಪೋರ್ಟ್‌ಗೆ ಪ್ರಯಾಣ ಬೆಳಸಲಿರುವ ಸಿಎಂ‌ ಸಿದ್ದರಾಮಯ್ಯ

ಸಮಾವೇಶದಲ್ಲಿ 20 ಸಾವಿರಕ್ಕೂ ಹೆಚ್ಚು ಜನರ ಸೇರಿಸಿ ಶಕ್ತಿ ಪ್ರದರ್ಶನಕ್ಕೆ ಲಕ್ಷ್ಮಣ್ ಸವದಿ ಸಿದ್ಧತೆ ಮಾಡಿದ್ದಾರೆ. ಯಾರಿಗೂ ತೊಂದರೆಯಾಗದಂತೆ ಮೂಲ ಸೌಕರ್ಯ ವ್ಯವಸ್ಥೆ ಕೂಡಾ ಕಲ್ಪಿಸಲಾಗಿದೆ.