ಉ.ಕ ಸುದ್ದಿಜಾಲ ಅಥಣಿ :
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಜಾತ್ರೆಯಲ್ಲಿ ಯುವಕನೋರ್ವ ತನ್ನ ಕೈಹಿಡಿದು ಎಳೆದಾಡಿದ್ದಾನೆಂದು ಮನನೊಂದು ಖಿನ್ನತೆಗೆ ಒಳಗಾಗಿ 19 ವರ್ಷದ ಯುವತಿಯೋರ್ವಳು ತೋಟದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಶುಕ್ರವಾರ ನಡೆದಿದೆ.
ಸಂಕೋನಟ್ಟಿ ಗ್ರಾಮದ ಸ್ವಪ್ನಾ ಸುಭಾಷ ಹಿಪ್ಪರಗಿ (19) ಆತ್ಮಹತ್ಯೆಗೀಡಾದ ಯುವತಿ, ಸಂಕೋನಟ್ಟಿ ಗ್ರಾಮದ ಸುನೀಲ ಅಣ್ಣಪ್ಪ ಧರಿಗೌಡರ ಕೈ ಹಿಡಿದು ಎಳೆದಾಡಿದ ಯುವಕ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುನೀಲ ಧರಿಗೌಡರ ಜತೆ ಸ್ವಪ್ನಾಳನ್ನು ವಿವಾಹ ಮಾಡಿಕೊಡಿ ಎಂದು ಸುನೀಲ ತಂದೆ-ತಾಯಿ ಈಚೆಗೆ ಯುವತಿಯ ಮನೆಗೆ ಬಂದು ಕೇಳಿದ್ದರು. ಮಗಳಿಗೆ ಈಗಲೇ ಮದುವೆ ಮಾಡುವುದಿಲ್ಲ ಎಂದು ಸ್ವಪ್ನಾಳ ತಂದೆ ಸುಭಾಷ ಹೇಳಿದ್ದರು.
ಅದೇ ಸಿಟ್ಟಿನಲ್ಲಿ ಜ.25 ರಂದು ಜಾತ್ರೆಯಲ್ಲಿ ಸುನೀಲನು ಸ್ವಪ್ನಾಳನ್ನು ಕೈ ಹಿಡಿದು ಎಳೆದಿದ್ದ. ಇದರಿಂದ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.