ಉ.ಕ ಸುದ್ದಿಜಾಲ ಬಾಗಲಕೋಟೆ :

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇಳಕಲ್ ತಾಲ್ಲೂಕಿನ ಗುಡಿಸಂಕಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. 27 ವರ್ಷದ ರಾಜು ಬಡಿಗೇರ ಎಂಬ ಯುವಕನು ಅಪಘಾತದಲ್ಲಿ ಮೃತಪಟ್ಟಿರುವುದು ದೃಢಪಟ್ಟಿದೆ.

ಮೃತರು ಜಂಬಲದಿನ್ನಿ ಗ್ರಾಮದ ನಿವಾಸಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದ ಹಿನ್ನೆಲೆ ಸ್ಥಳಕ್ಕೆ ಇಳಕಲ್ ಗ್ರಾಮೀಣ ಠಾಣೆಯ ಪೊಲೀಸರು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.