ಉ.ಕ ಸುದ್ದಿಜಾಲ ಬಾಗಲಕೋಟೆ :

ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಕಾರಿನಲ್ಲಿದ್ದ ಮೂವರು ಸಾವನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನ ಜಾಲಿಹಾಳ ಗ್ರಾಮದ ಬಳಿ ಗದಗ – ಬಾಗಲಕೋಟೆ ಮಾರ್ಗದ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು, ಇನೊರ್ವ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ.‌ ಬಸನಗೌಡ ಪಾಟಿಲ್(60), ಮಂಜುನಾಥ ಮಾರನಬಸರಿ (38) ಹಾಗೂ ಸಂಗಮ್ಮ ಪಾಟೀಲ್ (55) ಗದಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾನೆ. ಇನಿಬ್ಬರಿಗೆ ಗಾಯ ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲು. ಮೃತರು ಗದಗ ಜಿಲ್ಲೆ ಹಡಗಲಿ ಗ್ರಾಮದವರು.

ಬಾಗಲಕೋಟೆ ತಾಲ್ಲೂಕಿನ ಭಗವತಿ ಗ್ರಾಮಕ್ಕೆ ನಿನ್ನೆ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆ ಬಂದಿದ್ದರು ರಾತ್ರಿ ವಾಪಸ್ ಹೊರಡುವಾಗ ಘಟನೆ ನಡೆದಿದೆ. ಬದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.