ಉ.ಕ ಸುದ್ದಿಜಾಲ ಬಾಗಲಕೋಟೆ :

ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ ಅವರಿಗೆ ಮಾತೃ ವಿಯೋಗ, ನಿರಾಣಿ ಅವರ ತಾಯಿ ಸುಶೀಲಾಬಾಯಿ (78) ವಿಧಿವಶರಾಗಿದ್ದಾರೆ.

ಸುಶೀಲಾಬಾಯಿ ವಯೋಸಹಜ ಖಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ. ಕಳೆದ ಹತ್ತು ದಿನಗಳಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದರು

ಪತಿ‌ ರುದ್ರಪ್ಪ ನಿರಾಣಿ, ಐವರು ಗಂಡುಮಕ್ಕಳು, ಇಬ್ಬರು ಹೆಣ್ಣು‌ಮಕ್ಕಳು, ಐವರು ಸೊಸೆಯಂದಿರು 14 ಜನ   ಮೊಮ್ಮಕ್ಕಳನ್ನು ಅಗಲಿದ ಸುಶಿಲಾಬಾಯಿ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಸವಹಂಚಿನಾಳ ಗ್ರಾಮದಲ್ಲಿ‌ ‌ನೆಲೆಸಿದ್ದರು

ನಾಳೆ ಮಂಗಳವಾರ ಮದ್ಯಾಹ್ನ 1 ಗಂಟೆಗೆ ಸ್ವಗ್ರಾಮ ಬಸವಹಂಚಿನಾಳ‌ದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಸುಶಿಲಾಬಾಯಿ ಅವರ ಅಗಲಿಕೆಯಿಂದ ದುಃಖದಲ್ಲಿ‌ ಮುಳುಗಿದ ನಿರಾಣಿ ಅಪಾರ ಬಂಧು ಬಳಗ.