ಉ.ಕ ಸುದ್ದಿಜಾಲ ಬಾಗಲಕೋಟೆ :

ಪದ್ಮಶ್ರೀ ಇಬ್ರಾಹಿಂ ಸುತಾರ್ ಅವರ ಅಂತಿಮ‌ ಸಂಸ್ಕಾರಕ್ಕೆ ಸಕಲ ಸಿದ್ದತೆ ಮಾಡಲಾಗಿದ್ದು ಸಂಜೆ 4 ಕ್ಕೆ ಮಹಾಲಿಂಗಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗುವುದು ಸಾಯಂಕಾಲ‌ ಐದು ಗಂಟೆಗೆ ಇಬ್ರಾಹಿಂ ಸುತಾರ್ ಅವರ ತೋಟದಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ ಅವರು ಮಾಹಿತಿ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶಾಮಿಯಾನ, ಬ್ಯಾರಿಕೇಡ್‌ ಅಳವಡಿಕೆ ದರ್ಶನಕ್ಕೆ ಬಂದವರಿಗೆ ಕೂಡುವುದಕ್ಕೆ ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಮೈದಾನದ ತುಂಬೆಲ್ಲಾ ಅಗ್ನಿಶಾಮಕ ಸಿಬ್ಬಂದಿಯಿಂದ ನೀರು ಸಿಂಪಡಣೆ ಮಾಡಲಾಗಿದೆ. ಸಂಜೆ 5 ರ ಸುಮಾರಿಗೆ ಇಬ್ರಾಹಿಂ ಸುತಾರ್ ಅವರ ತೋಟದಲ್ಲಿ ಅಂತಿಮ ಸಂಸ್ಕಾರವು ಮುಸ್ಲಿಂ ಧರ್ಮದ ವಿಧಿವಿಧಾನಗಳಂತೆ ಅಂತಿಮ ಸಂಸ್ಕಾರ ನಡೆಯಲಿದೆ.