ಉತ್ತರ ಕರ್ನಾಟಕ ಸುದ್ದಿಜಾಲ ಬಾಗಲಕೋಟೆ :

ಬೈಕ್‌ಗೆ ಕ್ರೂಸರ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕಮತಗಿ ಕ್ರಾಸ್ ಬಳಿ ನಡೆದಿದೆ.

ಹಿಂಬದಿ ಬೈಕ್ ಸವಾರನಿಗೆ ಗಾಯವಾಗಿದ್ದು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜೆಸಾಬ್ ನದಾಪ್ (38) ಮೃತ ವ್ಯಕ್ತಿ. ಇತ ಬಾಗಲಕೋಟೆ ತಾಲ್ಲೂಕಿನ ಬೆನಕಟ್ಟಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.‌ ಸ್ಥಳಕ್ಕೆ ಅಮೀನಗಡ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.