ಉ.ಕ ಸುದ್ದಿಜಾಲ ಬೈಲಹೊಂಗಲ :

ವಸತಿ ನಿಲಯದಲ್ಲೇ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ‌ಬೈಲಹೊಂಗಲ ಪಟ್ಟಣದ ಇಂದಿರಾ ನಗರದಲ್ಲಿ ನಡೆದಿದೆ.

ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ.

ಇತರ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳಿಂದ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಬೈಲಹೊಂಗಲ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ‌.