ಉ.ಕ ಸುದ್ದಿಜಾಲ ಬೆಂಗಳೂರು :

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ನಲ್ಲಿ (ಬಿಎಂಆರ್ಸಿಎಲ್)ನಲ್ಲಿ ಖಾಲಿ ಇರುವ 50 ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ಗುತ್ತಿಗೆ ಆಧಾರದ ಮೇಲೆ 5 ವರ್ಷದ ಅವಧಿಗೆ ಈ ಹುದ್ದೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಸೇವೆ ವಿಸ್ತರಣೆ ನಡೆಯಲಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಇನ್ನೆರೆಡು ದಿನ ಮಾತ್ರ ಕಾಲಾವಕಾಶ ಇದೆ.

ಹುದ್ದೆ ವಿವರ : ಟ್ರೈನ್ ಆಪರೇಟರ್ (ಟಿಒ)- 50

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಪ್ಲೋಮಾ ಪದವಿ ಹೊಂದಿರಬೇಕು. ಹುದ್ದೆಗೆ ಸಂಬಂಧಿಸಿದಂತೆ ಮೂರು ವರ್ಷಗಳ ಹುದ್ದೆ ಅನುಭವ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು.

ವೇತನ: ಮಾಸಿಕ 35,000- 82,660 ರೂ.

ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಮಾಡಲಾಗಿಲ್ಲ.

ಈ ಹುದ್ದೆ ಮಾರ್ಚ್ 12ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಮೇ 4 ಆಗಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಬಳಿಕ ಪ್ರಿಂಟ್ ಔಟ್ ಪಡೆದು ಅಗತ್ಯ ದಾಖಲೆಯೊಂದಿಗೆ ಭರ್ತಿ ಮಾಡಿದ ಅರ್ಜಿಯ ಹಾರ್ಡ್ ಕಾಪಿ ಸಲ್ಲಿಕೆ ಮಾಡಲು ಇರುವ ಕಡೇಯ ದಿನಾಂಕ ಮೇ 9 ಆಗಿದೆ.

ಹಾರ್ಡ್ ಕಾಪಿ ಕಳುಹಿಸುವ ವಿಳಾಸ : ಜನರಲ್ ಮ್ಯಾನೇಜರ್ (ಎಚ್ಆರ್), ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್, 3 ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆಎಚ್ ರಸ್ತೆ, ಶಾಂತಿನಗರ, ಬೆಂಗಳೂರು- 560027.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು bmrc.co.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.