ಉ.ಕ ಸುದ್ದಿಜಾಲ ಬೆಳಗಾವಿ :
ಜೂನ್ ತಿಂಗಳಲ್ಲಿ ಮಳೆಯಾಗಬೇಕಿದ್ದು ಸಕಾಲಕ್ಕೆ ಮಳೆಯಾಗದೆ ಇರುವುದರಿಂದ ಮುಂಗಾರುಬೆಳೆ ವಿಳಂಭವಾಯಿತು. ಬಳಿಕ ಸ್ವಲ್ಪ ಪ್ರಮಾಣದಲ್ಲಿ ಮಳೆಯಾದ ಪರಿಣಾಮ ಜಿಲ್ಲೆಯ ಬಹುತೇಕ ತಾಲೂಕಗಳು ಬಿತ್ತನೆ ಆದವು. ಆದರೆ ಮಳೆ ಕುಂಠಿತ ಹಿನ್ನಲೆ ಬೆಳೆಗಳು ಎಲ್ಲವೂ ಒಣಗಿವೆ.
ಸಕಾಲಕ್ಕೆ ಮಳೆಯಾಗದ ಹಿನ್ನಲೆ ಬೆಳೆಗಳೆಲವೂ ಒಣಗಿದ ಪರಿಣಾಮ ಸಾಲ ಸೋಲ ಮಾಡಿ ಬಿತ್ತನೆ ಮಾಡಿದ ರೈತ ಕಂಗಾಲಾಗಿದ್ದಾನೆ. ಮೊನ್ನೆ ಅಷ್ಟೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ಬಳಿಕ ಕೃಷಿ ಸಚವ ಕೃಷ್ಣೆಬೈರೆಗೌಡ ಅವರು ಬೆಗಾವಿ ಜಿಲ್ಲೆಯ ಖಾನಾಪುರ ಹೊರತುಪಡಿಸಿ, ಜಿಲ್ಲೆಯ 13 ತಾಲ್ಲೂಕುಗಳನ್ನು ‘ತೀವ್ರ ಬರಪೀಡಿತ’ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಗಾವಿ ಜಿಲ್ಲೆಯ ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ, ಹುಕ್ಕೇರಿ, ರಾಮದುರ್ಗ, ರಾಯಬಾಗ, ಸವದತ್ತಿ, ಚನ್ನಮ್ಮನ ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ, ಯರಗಟ್ಟಿ ತಾಲ್ಲೂಕುಗಳನ್ನು ತೀವ್ರ ಬರಪೀಡಿತವೆಂದು ಗುರುತಿಸಲಾಗಿದೆ. ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕುಗಳನ್ನು ಈ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಹಂಗಾಮಿನಲ್ಲಿ(ಜೂನ್ 1ರಿಂದ ಈವರೆಗೆ) 514 ಮಿ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ, 456 ಮಿ.ಮೀ ಮಳೆಯಾಗಿದೆ. ಶೇ 11ರಷ್ಟು ಮಳೆ ಕೊರತೆ ಉಂಟಾಗಿದೆ. 7.11 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ ಹಾಕಿಕೊಂಡಿದ್ದೆವು. ಆದರೆ, ಈವರೆಗೆ 6.39 ಲಕ್ಷ ಹೆಕ್ಟೇರ್‌ನಲ್ಲಿ(ಶೇ 90) ಬಿತ್ತನೆಯಾಗಿದೆ’ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು.
ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನಲ್ಲಿ ಹೆಚ್ಚಾಗಿ ಭತ್ತ ಬೆಳೆಯಲಾಗುತ್ತದೆ. ವಾಡಿಕೆಯಷ್ಟು ಮಳೆಯಾಗದ ಕಾರಣ, ಬೆಳೆಯ ಇಳುವರಿ ಕುಸಿದಿದೆ. ವಾರದೊಳಗೆ ಉತ್ತಮ ಮಳೆಯಾಗದಿದ್ದರೆ, ಈಗ ಇರುವ ಬೆಳೆಯೂ ಒಣಗಲಿದೆ. ಹಾಗಾಗಿ ಅಧಿಕಾರಿಗಳು ಮತ್ತೊಮ್ಮೆ ಸಮೀಕ್ಷೆ ನಡೆಸಿ, ಇವೆರಡೂ ತಾಲ್ಲೂಕುಗಳನ್ನು ತೀವ್ರ ಬರಪೀಡಿತವೆಂದು ಘೋಷಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.