ಉ.ಕ ಸುದ್ದಿಜಾಲ ಬೆಳಗಾವಿ :
ಕಲುಷಿತ ಆಹಾರ ಸೇವನೆ ಆರೋಪ 30 ವಿದ್ಯಾರ್ಥಿಗಳು ಅಸ್ವಸ್ಥ. ಬೆಳಗಾವಿ ತಾಲೂಕಿನ ಮಚ್ಛೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ. ವಾರ್ಡನ್ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ. ಅಸ್ವಸ್ಥ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ತೋರಿಲ್ಲ ಎಂದು ವಾರ್ಡ್ನನಗೆ ತರಾಟೆ.
ಹಾಸ್ಟೆಲ್ನಲ್ಲಿ ಸ್ವಚ್ಛತೆ, ಆಹಾರದ ಗುಣಮಟ್ಟ ಇಲ್ಲವೆಂದು ವಿದ್ಯಾರ್ಥಿಗಳ ದೂರು. ಸಮಸ್ಯೆ ಹೇಳಿದರೂ ಸ್ಪಂದನೆ ಇಲ್ಲ, ಪ್ರತಿಭಟನೆ ನಡೆದರೂ ಸ್ಥಳಕ್ಕೆ ಮೇಲಾಧಿಕಾರಿಗಳು ಬರ್ತಿಲ್ಲ ಎಂದು ಆಕ್ರೋಶ. ಮಚ್ಛೆ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ತಡರಾತ್ರಿವರೆಗೂ ವಿದ್ಯಾರ್ಥಿಗಳ ಪ್ರತಿಭಟನೆ.
