ಉ.ಕ ಸುದ್ದಿಜಾಲ ಚಿಕ್ಕೋಡಿ :

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ವಾಹನಕ್ಕೆ ಬೈಕ್ ಸವಾರರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ನೇಹಿತರು ಮೃತ ಪಟ್ಟಿರುವ ದುರ್ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ರಕ್ಷಿ-ಶಿರಗಾಂವ ರಸ್ತೆ ಮಧ್ಯೆ ನಡೆದಿದೆ.

ಸವದತ್ತಿ ತಾಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ ( 21 ) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತ ಯುವಕರು. ಇವರಿಬ್ಬರೂ ರಕ್ಷಿ ಕಡೆಯಿಂದ ಶಿರಗಾಂವ ಗ್ರಾಮದ ಕಡೆಗೆ ಬೈಕ್ ಮೇಲೆ ವೇಗವಾಗಿ ಹೊಗುತ್ತಿರುವಾಗ ರಸ್ತೆ ಬದಿಯ ಟ್ರ್ಯಾಕ್ಟರ್ ವಾಹನಕ್ಕೆ ರಭಸದಿಂದ ಡಿಕ್ಕಿ ಹೊಡಿದಿದೆ.

ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಸ್ಥಳಿಯರ ಸಹಾಯದಿಂದ ಆಂಬ್ಯುಲನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಯುವಕರು ಮೃತ ಪಟ್ಟಿದ್ದಾರೆ. ಹುಕ್ಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.