ಉ.ಕ ಸುದ್ದಿಜಾಲ ಬೆಂಗಳೂರು :

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ದರ್ಶನ ಮಾಡಲು ತೆರಳಿದ್ದವರ ವಾಹನ ಭೀಕರ ಅಪಘಾತಕ್ಕೀಡಾಗಿ ಆರು ಜನ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ  ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.  ಈಗಾಗಲೇ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು,ಪ್ರಕರಣದ  ತನಿಖೆ ಮಾಡಲು ಕೂಡ ಸೂಚಿಸಲಾಗಿದೆ ಎಂದರು.

ದಶಪಥ ರಸ್ತೆ ಲೋಕಾರ್ಪಣೆ : ಪರಿಶೀಲಿಸಿ ತೀರ್ಮಾನ
ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಲೋಕಾರ್ಪಣೆಗೆ ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆಲಸ ಸಂಪೂರ್ಣವಾದ ನಂತರವೇ ಲೋಕಾರ್ಪಣೆಯಾಗಲಿದೆ. 

ಈ ಬಗ್ಗೆ  ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನೀತಿ  ಗಡ್ಕರಿ ಅವರೊಂದಿಗೆ ಇಂದು ಸಂಜೆ ಸಭೆಯಲ್ಲಿ ಚರ್ಚಿಸಿ, ಪರಿಸ್ಥಿತಿ ಪರಿಶೀಲಿಸಿ, ತೀರ್ಮಾನಕ್ಕೆ ಬರಲಾಗುವುದು ಎಂದರು.

ಸ್ಯಾಂಟ್ರೋ ರವಿ ಜೊತೆ ಬಿಜೆಪಿ ನಾಯಕರು ಸಂಪರ್ಕ ದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಯಾಂಟ್ರೋ ರವಿ ಬಗ್ಗೆ ಹೇಳಿರುವುದು, ಅವರು ಯಾರು ಎಂದೂ ನನಗೆ ಗೊತ್ತಿಲ್ಲ ಎಂದರು.