ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಂಬೆಳಗ್ಗೆ ಯರಗಟ್ಟಿಯಲ್ಲಿ ಭೀಕರ ರಸ್ತೆ ಅಪಘಾತ ಲಾರಿ ಚಾಲಕ ಸ್ಥಳದಲ್ಲೇ ಸಾವು, ಕಾರಿನಲ್ಲಿದ್ದ ತಂದೆ-ಮಗ ಸೇರಿ ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯರಗಟ್ಟಿ ಬಳಿ ನಡೆದಿದೆ.
ಯರಗಟ್ಟಿಯ ಭೀರೇಶ್ವರ ಬ್ಯಾಂಕ್ ಎದುರಿನ ರಸ್ತೆ ಪಕ್ಕ ನಿಂತಿದ್ದ ಲಾರಿ ಚಾಲಕನಿಗೆ ರಭಸವಾಗಿ ಗುದ್ದಿದ ಕಾರು, ಲಾರಿ ಸೈಡ್‌ಗೆ ಹಾಕಿ ಲಾರಿಯಲ್ಲಿದ್ದ ಸರಕಿಗೆ ಹಗ್ಗ ಕಟ್ಟಿ ಪ್ಯಾಕ್ ಮಾಡುತ್ತಿದ್ದ ಲಾರಿ ಚಾಲಕನಿಗೆ ಗುದ್ದಿದ ಕಾರು ಸ್ಥಳದಲ್ಲೇ ಮೃತಪಟ್ಟ ಲಾರಿ ಚಾಲಕ, ಕಾರಿನಲ್ಲಿದ್ದ ಸ್ಥಿತಿ ಚಿಂತಾಜನಕ.
ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದ ರಂಗಪ್ಪ ಗುರುಸಿದ್ದಪ್ಪ ಪಾಟೀಲ (30) ಸಾವುನಪ್ಪಿರುವ ದುರ್ದೈವಿ. ಕಾರಿನಲ್ಲಿದ್ದ ಅಮರೆಗೌಡ ಮಾಲಿಪಾಟೀಲ (58) ಗೌಡಪ್ಪಗೌಡ ಮಾಲಿಪಾಟೀಲ (25) ಗಾಯಗೊಂಡವರು, ವೀರಭದ್ರಗೌಡ ಡಬಿ (32), ಹನುಮಂತ ಬೆಟಗೇರಿ (23) ಸಣ್ಣಪುಟ್ಟ ಗಾಯ
ಗಾಯಾಲುಗಳು ರಾಯಚೂರ ಜಿಲ್ಲೆಯ ಸಿಂಧನೂರು ಪಟ್ಟಣದವರು. ಮಾಸಿಕ ಚೆಕ್‌ಅಪ್‌ಗೆ ಸಿಫ್ಟ್ ಕಾರಲ್ಲಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಬರುತ್ತಿದ್ದ ತಂದೆ-ಮಗ. ಕಾರಿನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಗುದ್ದಿದ ಕಾರು ಗಾಯಗೊಂಡ ನಾಲ್ವರನ್ನು ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ರವಾನೆ. ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.