ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಮೂವರು ಸಾವು. ಕುಡಚಿ ಠಾಣೆ ಎಎಸ್ಐ ವೈ ಎಂ ಹಲಕಿರವರ ಪತ್ನಿ, ಪುತ್ರಿ ಸೇರಿ ಮೂವರ ಸಾವು. ಮೂವರಿಗೆ ಗಂಭೀರ ಗಾಯ, ಸ್ಥಳೀಯ ಆಸ್ಪತ್ರೆಗೆ ರವಾನೆ.
ಬೆಳಗಾವಿ – ಬಾಗಲಕೋಟ ರಸ್ತೆಯ ಬೂದಿಗೊಪ್ಪ ಕ್ರಾಸ್ ಬಳಿ ದುರ್ಘಟನೆ. ಸ್ವಿಫ್ಟ್ ಡಿಸೈರ್, ಬೈಕ್‌ಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ. ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಯರಗಟ್ಟಿಯತ್ತ ತೆರಳುತ್ತಿದ್ದ ಎಎಸ್ಐ ಕುಟುಂಬ. ಲಾರಿ ಡಿಕ್ಕಿಯ ರಭಸಕ್ಕೆ ಸ್ವಿಫ್ಟ್ ಡಿಸೈರ್ ಕಾರು ಸಂಪೂರ್ಣ ನಜ್ಜುಗುಜ್ಜು.
ಸಿಮೆಂಟ್ ತುಂಬಿಕೊಂಡು ಬೆಳಗಾವಿಯತ್ತ ಬರುತ್ತಿದ್ದ ಲಾರಿ.
ಕುಡಚಿ ಠಾಣೆ ಎಎಸ್ಐ ಪತ್ನಿ, ಪುತ್ರಿ, ಕಾರು ಚಾಲಕ ದುರ್ಮರಣ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.