ಉ.ಕ ಸುದ್ದಿಜಾಲ ಬೆಳಗಾವಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ತವರು ಕ್ಷೇತ್ರದಲ್ಲೇ ಮಹಿಳೆ ಮೇಲೆ ದೌರ್ಜನ್ಯ, ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ. ಅಂಗನವಾಡಿ ಸಹಾಯಕಿ ಮೇಲೆ ರಾಕ್ಷಸಿ ವರ್ತನೆ ತೋರಿದ ದುಷ್ಟ.
ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ನಡೆದ ಘಟನೆ. ಸುಗಂಧಾ ಮೋರೆ(50) ಸಾವು ಬದುಕಿನ ಮಧ್ಯೆ ನರಳಾಡುತ್ತಿರುವ ಮಹಿಳೆ. ಅಂಗನವಾಡಿ ಮಕ್ಕಳು ಪಕ್ಕದ ಮನೆಯಲ್ಲಿ ಹೂ ಕಿತ್ರೂ ಅಂತಾ ಅಟ್ಟಹಾಸ. ಅಂಗನವಾಡಿ ಸಹಾಯಕಿಗೆ ಥಳಿಸಿ ಕುಡಗೋಲಿನಿಂದ ಮಾರಣಾಂತಿಕ ಹಲ್ಲೆ.
ಮೂಗು ಕಟ್ ಆಗಿ ಶ್ವಾಸಕೋಶದಲ್ಲಿ ರಕ್ತ ಹೋಗಿ ಸಾವು ಬದುಕಿನ ಮಧ್ಯೆ ಹೋರಾಡ್ತಿರುವ ಮಹಿಳೆ. ಮಕ್ಕಳು ಆಡವಾಡ್ತಾ ಮಲ್ಲಿಗೆ ಹೂ ಕಿತ್ತಿದ್ದಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ. ಮಕ್ಕಳ ಮಾಡಿದ ತಪ್ಪಿಗೆ ಸಹಾಯಕಿಗೆ ಮಹಿಳೆ ಅನ್ನೋದನ್ನೂ ಮರೆತು ಹಲ್ಲೆ ಮಾಡಿದ ಪಾಪಿ. ಅದೇ ಗ್ರಾಮದ ಕಲ್ಯಾಣಿ ಮೋರೆ ಎಂಬಾತನಿಂದ ದುಷ್ಕೃತ್ಯ.
ಜ.1ರಂದು ಅಂಗನವಾಡಿ ಕೇಂದ್ರದ ಮುಂದೆ ನಡೆದಿದ್ದ ಘಟನೆ. ದಿನೇ ದಿನೇ ಹೆಚ್ಚುತ್ತಿರುವ ರಾಕ್ಷಸಿ ವರ್ತನೆ ಕಂಡು ಬೆಚ್ಚಿ ಬಿದ್ದ ಬೆಳಗಾವಿ ಜನರು. ಮೂಗ ಗಂಡನನೊಂದಿಗೆ ಅಂಗನವಾಡಿ ಸಹಾಯಕಿಯಾಗಿ ಜೀವನ ಕಟ್ಟಿಕೊಳ್ತಿದ್ದ ಮಹಿಳೆ.
ಸದ್ಯ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಗಂಧಾ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಈ ವರೆಗೂ ಅರೋಪಿ ಕಲ್ಯಾಣಿ ಬಂಧಿಸದ ಪೊಲೀಸರು.