ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿ ತಾಲೂಕಿನ ಬಸುರ್ತೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ಮೂಗು ಕಟ್ ಮಾಡಿದ ವಿಚಾರ. ಅಂಗನವಾಡಿ ಸಹಾಯಕಿ ಸುಗಂಧಾ ಮೋರೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು.

ಜ.1ರಂದು ಮಕ್ಕಳು ಆರೋಪಿ ಮನೆ ಮುಂದಿನ ಹೂ ಕಿತ್ತಿದ್ದಕ್ಕೆ ಹಲ್ಲೆ. ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿ ಮೂಗು ಕಟ್ ಮಾಡಿದ್ದ ಪಾಪಿ. ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧಿಸಿದ ಕಾಕತಿ ಠಾಣೆ ಪೊಲೀಸರು.

ಕಲ್ಲಪ್ಪ ಅಲಿಯಾಸ್ ಕಲ್ಯಾಣಿ ಮೋರೆ (44) ಬಂಧಿತ ಆರೋಪಿ. ಈ ಕುರಿತು ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಗಂಧಾ.