ಉ.ಕ ಸುದ್ದಿಜಾಲ ಬೆಳಗಾವಿ :

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯಾವ ಅಭ್ಯರ್ಥಿಗೆ ಬಿಜೆಪಿ ಟಿಕೆಟ್ ಕೊಟ್ಟರೂ ಗೆಲ್ಲಿಸಿ, ನರೇಂದ್ರ ಮೋದಿ ಅವರನ್ನೇ ಮತ್ತೆ ಪ್ರಧಾನಿಯಾಗಿಸಲು ಕಾರ್ಯಕರ್ತರು ದೃಢಸಂಕಲ್ಪ ಮಾಡಬೇಕು ಎಂದು ಬಿಜೆಪಿ ಪಕ್ಷದ ಬೆಲಕಗಾವಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.

ಬೆಳಗಾವಿಯ ಹಿಂದವಾಡಿಯ ಗೋಮಟೇಶ ವಿದ್ಯಾಪೀಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೆಳಗಾವಿ ಗ್ರಾಮೀಣ, ದಕ್ಷಿಣ ಹಾಗೂ ಉತ್ತರ ಕ್ಷೇತ್ರಗಳ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಮ ಮಂದಿರ ನಿರ್ಮಾಣ ವಿಚಾರವಾಗಿ ಕಾಂಗ್ರೆಸ್‌ನವರು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಕೋರಿದರು.

ಶಾಸಕ ಅಭಯ ಪಾಟೀಲ ಮಾತನಾಡಿ ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮುಖಂಡರಲ್ಲಿನ ಕಿತ್ತಾಟದಿಂದ ಬಿಜೆಪಿ ಸೋಲಬೇಕಾಯಿತು. ಪಕ್ಷದಲ್ಲಿ ಇದ್ದುಕೊಂಡು ಕುತಂತ್ರ ಮಾಡಿದವರಿಗೆ ಮುಂದಿನ ದಿನಗಳಲ್ಲಿ ಕಾರ್ಯಕರ್ತರೇ ಪಾಠ ಕಲಿಸಬೇಕು ಎಂದರು.

ರಾಮ ಒಂದು ಜಾತಿಗೆ ಸೀಮಿತವಲ್ಲ. ಆತ ಈ ಜಗತ್ತು ಕಂಡ ಮಹಾನ್‌ ಪುರುಷ. ಆತನ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮೂರು ವಿಧಾನಸಭೆ ಕ್ಷೇತ್ರಗಳ ಕಾರ್ಯಕರ್ತರಿಗೆ ಸಂಜಯ ಪಾಟೀಲ ವತಿಯಿಂದ ಹೆಲ್ಮೆಟ್‌ ವಿತರಿಸಲಾಯಿತು. ಬೆಳಗಾವಿ ಉತ್ತರ , ಬೆಳಗಾವಿ ದಕ್ಷಿಣ ಹಾಗೂ ಬೆಳಗಾವಿ ಗ್ರಾಮೀಣ‌ ಮತಕ್ಷೇತ್ರದ ಪದಾಧಿಕಾರಿಗಳಿಗೆ ಹೆಲ್ಮೆಟ್ ವಿತರಣೆ ಮಾಡಲಾಯಿತು.

ಕಳೆದ ವರ್ಷವೂ ಕ್ಷೇತ್ರದ ಮತದಾರರಿಗೆ ಗಿಫ್ಟ್ ವಿತರಿಸಿದ್ದ ಸಂಜಯ ಪಾಟೀಲ್, ಕಳೆದ ಬಾರಿ ಸಂಜಯ ಪಾಟೀಲ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿತ್ತು ಈ ಬಾರಿಯೂ ಬೆಳಗಾವಿ ಲೋಕಸಭೆಗೆ ಸಂಜಯ ಪಾಟೀಲ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಹೀಗಾಗಿ ಬೆಳಗಾವಿ ಲೋಕಸಭಾ ವ್ಯಾಪ್ತಿಯ 8 ಮತಕ್ಷೇತ್ರದ ಪಕ್ಷದ ಪದಾಧಿಕಾರಿಗಳನ್ನ ಸೆಳೆಯಲು ಹೆಲ್ಮೆಟ್ ವಿತರಣೆ ಮಾಡಿದ ಸಂಜಯ ಪಾಟೀಲ.