ಉ.ಕ ಸುದ್ದಿಜಾಲ ಬೆಳಗಾವಿ :

ಬಸ್‌ನಲ್ಲಿ ಸೀಟಗಾಗಿ ಮಹಿಳೆಯರ ಜಡೆ ಜಗಳ ವೈರಲ್ ವಿಡಿಯೋ

ಶಕ್ತಿ ಯೋಜನೆಯಿಂದ ಮಹಿಳೆಯರ ಓಡಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಹೋಗುತ್ತುದೆ. ಹಲವಾರು ಕಡೆ ದೊಡ್ಡ ಮಟ್ಟದಲ್ಲಿ ಮಹಿಳಾ ಮನಿಗಳು ಜಗಳಾಡುವುದು ಸರ್ವೆ ಸಾಮಾನ್ಯವಾಗಿದೆ‌. ಬೆಳಗಾವಿಯಲ್ಲಿ ಸರ್ಕಾರಿ ಬಸ್‌ನಲ್ಲಿ ಸೀಟ್‌ಗಾಗಿ ಇಬ್ಬರು ಮಹಿಳೆಯರ ನಡುವೆ ಜಗಳ ಚಪ್ಪಲಿ ಹಿಡಿದು ಪರಸ್ಪರ ಜಗಳಾಡುವ ಹಂತಕ್ಕೆ ತಲುಕಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ – ಬೆಳಗಾವಿ ಮಾರ್ಗದ ಬಸ್‌ನಲ್ಲಿ ನಡೆದ – ಹೊಡೆದಾಟದ ದೃಶ್ಯ ಈಗ ವೈರಲ್ ಆಗಿದೆ. ಇದರಲ್ಲಿ ಸೀಟ್‌ಗಾಗಿ ಇಬ್ಬರು ಮಹಿಳೆಯರ ನಡುವೆ ದೊಡ್ಡ ಕಿತ್ತಾಟವೇ ನಡೆಯುತ್ತದೆ. ಅರಂಭದಲ್ಲಿ ಸೀಟಿನ ವಿಚಾರಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರ ನಡುವೆ ಮಾತಿಗೆ ಮಾತು ಬೆಳೆಯುತ್ತದೆ.