ಉ.ಕ ಸುದ್ದಿಜಾಲ ಬೆಳಗಾವಿ :

ಟಿಪ್ಪರ್ ಮತ್ತು ಕಾರಿನ ಮಧ್ಯೆ ಬೀಕರ ರಸ್ತೆ ಅಪಘಾತ ಇಬ್ಬರ ಸಜೀವ ದಹನವಾಗಿರುವ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ದುರ್ಘಟನೆ‌ ನಡೆದಿದೆ.

ಮದುವೆ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದ ಕುಟುಂಬ. ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟ್ಟಿದ್ದ ನಾಲ್ವರು. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿ.
ಟಿಪ್ಪರ್ ನ ಡಿಸೇಲ್ ಟ್ಯಾಂಕ್ ಒಡೆದು ಹೊತ್ತಿ ಉರಿದ ಕಾರು, ಟಿಪ್ಪರ್.

ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಜೀವ ದಹನ, ಇಬ್ಬರಿಗೆ ಗಂಭೀರ ಗಾಯ. ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತ ದುರ್ದೈವಿ.

ಸ್ಥಳೀಯರಿಂದ ಇಬ್ಬರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ. ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗುಂದ್ಕರ್ ಗಂಭೀರ ಗಾಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ಬೆಂಕಿ ನಂದಿಸಿದ ಅಗ್ನಿ ಶಾಮಕ ಸಿಬ್ಬಂದಿ.

ಸ್ಥಳಕ್ಕೆ ಡಿಸಿಪಿ ಸ್ನೇಹಾ, ಎಸಿಪಿ ಮತ್ತು ಕಾಕತಿ ಠಾಣೆ ಪೊಲೀಸರ ಭೇಟಿ ಪರಿಶೀಲನೆ. ಇಬ್ಬರ ಶವವನ್ನ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ.

ಅಪಘಾತ ಆಗ್ತಿದ್ದಂತೆ ಪೊಲೀಸ್ ಠಾಣೆಗೆ ತೆರಳಿ ಶರಣಾದ ಟಿಪ್ಪರ್ ಡ್ರೈವರ್. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.