ಉ.ಕ ಸುದ್ದಿಜಾಲ ಬೆಳಗಾವಿ :

ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಣೆ ಮಾಡಲಾಗಿದೆ. ಸಿಎಂ ಆಗಮನ ಸಂದರ್ಭದಲ್ಲಿ ಪ್ರಧಾನಿ ಮೋದಿ ನಿರ್ಗಮನ ಹಿನ್ನೆಲೆ ಸಿಎಂ ವಿಶೇಷ ವಿಮಾನಕ್ಕೆ ಲ್ಯಾಂಡಿಂಗ್ ಗೆ ಸಿಗದ ಅನುಮತಿ.

ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಸಿಎಂ ವಿಶೇಷ ವಿಮಾನ. 11.45ಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಶಿರಸಿಗೆ ತೆರಳಲಿರುವ ಪಿಎಂ ಈ ಕಾರಣಕ್ಕೆ ಸಿಎಂ ವಿಶೇಷ ವಿಮಾನ ಲ್ಯಾಂಡಿಂಗ್ ಗೆ ಅನುಮತಿ ನಿರಾಕರಣೆ ಮಾಡಲಾಗಿದೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಬದಲಿಗೆ ಪಕ್ಕದ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿರುವ ಸಿಎಂ ಮಧ್ಯಾಹ್ನ 12ಗಂಟೆಗೆ ಕೊಲ್ಲಾಪುರದ ಛತ್ರಪತಿ ರಾಜಾರಾಮ್ ಮಹಾರಾಜ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ

ಬಳಿಕ ಹೆಲಿಕಾಪ್ಟರ್ ಮೂಲಕ ಕಾಗವಾಡ ತಾಲೂಕಿನ ಉಗಾರ್ ಖುರ್ದಗೆ ತೆರಳಲಿರುವ ಸಿಎಂ ಬಳಿಕ ಅಲ್ಲಿಂದ ಮಧ್ಯಾಹ್ನ 3ಕ್ಕೆ ಯರಗಟ್ಟಿ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.