ಉ.ಕ ಸುದ್ದಿಜಾಲ ಬೆಳಗಾವಿ :

ಇಂದು ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ ಪ್ರವಾಸ. ಸಿಎಂ ಸಿದ್ದರಾಮಯ್ಯ ಅವರಿಂದ ನೂರಾರು ಕೋಟಿ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ. ಬೆಳಗ್ಗೆ 11.30ಕ್ಕೆ ಮೈಸೂರಿನಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಿಎಂ ಆಗಮನ.

ವಿಶೇಷ ವಿಮಾನದಲ್ಲಿ ಆಗಮಿಸಲಿರೋ‌ ಸಿಎಂ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬೀಮ್ಸ್ ಆಸ್ಪತ್ರೆ) ಆವರಣದಲ್ಲಿ ನಡೆಯಲಿರೋ ಕಾರ್ಯಕ್ರಮದಲ್ಲಿ ಭಾಗ. ಬೀಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ. ಗೃಹ ವೈದ್ಯರ ವಸತಿ ನಿಲಯ ಕಟ್ಟಡದ ಉದ್ಘಾಟನೆ ನೇರವೇರಿಸುವರು.

ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಿರೋ ಹೈಟೆಕ್ ಸಿಟಿ ಬಸ್ ನಿಲ್ದಾಣ ಲೋಕಾರ್ಪಣೆ ಮಾಡುವರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಕಟ್ಟಡ, ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ಮಾಡಲಿರೋ‌ ಸಿಎಂ ಸಿದ್ದರಾಮಯ್ಯ.

ಸಿಎಂ ಗೆ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌, ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಶಾಸಕ‌ ಆಸೀಫ್ ಸೇಠ್ ಸೇರಿ ಜಿಲ್ಲೆಯ ಶಾಸಕರು‌ ಸಾಥ್ ನೀಡುವರು.