ಉ.ಕ ಸುದ್ದಿಜಾಲ‌ ಬೆಳಗಾವಿ :

ದಸರಾ ಹಬ್ಬದ ಹಿನ್ನೆಲೆಯಲ್ಲಿ ಬೆಳಗಾವಿ-ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲಿನ ಸೇವೆಯನ್ನು ಅ.1ರಿಂದ 31ರವರೆಗೆ ವಿಸ್ತರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

ನನ್ನ ಮನವಿ ಮೇರೆಗೆ, ಸೇವೆ ಮುಂದುವರಿಕೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಬೆಳಿಗ್ಗೆ 6ಕ್ಕೆ ಬೆಳಗಾವಿಯಿಂದ ಹೊರಡುವ ರೈಲು 9ಕ್ಕೆ ಮೀರಜ್‌ ತಲುಪಲಿದೆ. 9.50ಕ್ಕೆ ಮೀರಜ್‌ನಿಂದ ಹೊರಡುವ ರೈಲು, ಮಧ್ಯಾಹ್ನ 12.50ಕ್ಕೆ ಬೆಳಗಾವಿಗೆ ಆಗಮಿಸಲಿದೆ.