ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿ ಗ್ರಾಮಾಂತರ ಮಾಜಿ ಶಾಸಕ, ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ, ಸಂಜಯ್ ಪಾಟೀಲ್‍ಗೆ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇತ್ತೀಚಿಗೆ ಜಾರ್ಖಂಡ್ ಪ್ರವಾಸ ಮುಗಿಸಿ ಬಂದ ಬಳಿಕ ಮಾಜಿ ಶಾಸಕ ಸಂಜಯ್ ಪಾಟೀಲ್ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಈ ವೇಳೆ ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಕೊರೊನಾ ಸೋಂಕು ಪತ್ತೆಯಾಗುತ್ತಿದ್ದಂತೆ ಸಂಜಯ್ ಪಾಟೀಲ್ ಕೊಲ್ಹಾಪುರ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.