ಉ.ಕ ಸುದ್ದಿಜಾಲ ಬೆಳಗಾವಿ :
ಬೆಳಗಾವಿ ಜಿಲ್ಲೆಯ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕೋಡಿ ಉಪವಿಭಾಗದಲ್ಲಿ 11 sಸೇತುವೆ ಜಲಾವೃತ ನದಿ ತೀರದ ಜನರಲ್ಲಿ ಹೆಚ್ಚಾದ ಆತಂಕ. ಈಗಾಗಲೇ ದನ ಕರುಗಳನ್ನ ಬೇರೆ ಕಡೆ ಒಯ್ಯೂತ್ತಿರುವ ನದಿ ತೀರದ ಜನರು.