ಉ.ಕ ಸುದ್ದಿಜಾಲ ಬೆಳಗಾವಿ :

ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಿದ 18 ಎಂಇಎಸ್ ಪುಂಡರ ವಿರುದ್ಧ ಪ್ರಕರಣ ದಾಖಲು. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಎಂಇಎಸ್ ಪುಂಡರ ವಿರುದ್ಧ ಎಫ್ಐಆರ್.

ಕನ್ನಡ ರಾಜ್ಯೋತ್ಸವ ಪ್ರತಿಯಾಗಿ ಕರಾಳ ದಿನ ಆಚರಿಸಿದ್ದ ನಾಡದ್ರೋಹಿ ಎಂಇಎಸ್‌ನ 18ಜನರ ಮೇಲೆ ಪ್ರಕರಣ ದಾಖಲು ಮಾಡಿದ ಪೋಲಿಸರು. ಅನುಮತಿ ಇಲ್ಲದಿದ್ದರೂ ನಗರದಲ್ಲಿ ಕರಾಳ ದಿನಾಚರಣೆ ಹೆಸರಲ್ಲಿ ಮೆರವಣಿಗೆ ಮಾಡಿದ್ದ ಎಂಇಎಸ್ ಪುಂಡರು.

ಬೆಳಗಾವಿ, ಬೀದರ್, ಭಾಲ್ಕಿ,ನಿಪ್ಪಾಣಿ, ಕಾರವಾರ ಸಂಯುಕ್ತ ಮಹಾರಾಷ್ಟ್ರ ಅಂತಾ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ ಪುಂಡರ ವಿರುದ್ಧ ಕೇಸ್ ಜಡಿದ ಪೊಲೀಸರು.

ಎಂಇಎಸ್ ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ, ರಂಜಿತ್ ಚವ್ಹಾಣ, ಸರಿತಾ ಪಾಟೀಲ, ಸಾರಿಕಾ ಪಾಟೀಲ, ಅಮರ, ಯಳ್ಳೂರಕರ್ ಪ್ರಕಾಶ ಮರಗಾಲಿ, ರವಿ ಸಾಳುಂಕೆ, ಅಂಕುಶ ಕೇಸರಕರ್ ಸೇರಿದಂತೆ 18ಜನರ ವಿರುದ್ಧ ಬೆಳಗಾವಿ ಮಾರ್ಕೆಟ್ ಪೋಲಿಸ್ ಠಾಣೆಯಲ್ಲಿ ಪ್ರಲರಣ ದಾಖಲು.