ಉ.ಕ ಸುದ್ದಿಜಾಲ ಬೆಳಗಾವಿ :

ಕನ್ನಡ ಭಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣ  ವಿಚಾರ ಸಂಬಂಧಿಸಿದಂತೆ ಹಲ್ಲೆ ನಡೆಸಿದ ನಾಲ್ವರ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೋಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ನೊಂದ ವಿದ್ಯಾರ್ಥಿ ದೂರಿನನ್ವಯ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಇತ್ತೀಚಿಗೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಕನ್ನಡ ಧ್ವಜ ಹಾರಿಸಿದಕ್ಕೆ ಹಲ್ಲೆ ನಡೆದಿತ್ತು.

ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಕನ್ನಡ ಧ್ವಜ ಹಾರಿಸಿದ್ದಕ್ಕೆ ಆತನ ಸಹಪಾಠಿಗಳಿಂದ ಹಲ್ಲೆ ಮೂವರು ಅಪ್ರಾಪ್ತರು ಒಬ್ಬ ಪ್ರಾಪ್ತ ಯುವಕ ಸೇರಿ ಒಟ್ಟು ನಾಲ್ಕು ಜನರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡ ಟಿಳಕವಾಡಿ ಪೋಲಿಸರು.