ಬೆಳಗಾವಿ :

ಬೆಳಗಾವಿಯಲ್ಲಿ ಸ್ಥಳೀಯ ಸಂಸ್ಥೆ ಗಳಿಂದ ಪರಿಷತನ ಎರಡು ಸ್ಥಾನಗಳಿಗೆ ಚುನಾವಣೆ ಈಗಾಗಲೇ ದಿನಾಂಕ‌ ನಿಗಧಿಯಾಗಿದ್ದು, ನಾಳೆ ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆಗೆ ತಯಾರಿ ನಡೆದಿದೆ.

ನಾಮಪತ್ರ ಸಲ್ಲಿಕೆ ವೇಳೆ ಶಕ್ತಿ ಪ್ರದರ್ಶನಕ್ಕೆ ಮುಂದಾದ ಜಾರಕಿಹೋಳಿ ಸಹೋದರರು ನಾಳೆ ಮದ್ಯಾಹ್ನ 12 ಗಂಟೆಗೆ‌ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲ್ಲಿರುವ ಲಖನ್ ಜಾರಕಿಹೋಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿ ಮಾಡಲಿದ್ದಾರೆ. ಬಿಜೆಪಿ ಟಿಕೇಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸುತ್ತಿರುವ ಲಖನ್ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಶಕ್ತಿ ಪ್ರದರ್ಶನ ತೋರಲಿದ್ದಾರೆ.

ಜಾರಕಿಹೊಳಿ ಸಹೋದರರು ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ಗ್ರಾ.ಪಂ.ಸದಸ್ಯರ ಸೇರಿಸಿ ರಾಲಿ ನಡೆಸಲು ತಯಾರಿ ನಡೆಸಿದ್ದಾರಂತೆ‌. ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಶಾಕ್ ನೀಡಲು ತಯಾರಿ ನಡೆದಿದೆ. ಅಂಗಾರ ಸಂಕಷ್ಟ ಚತುರ್ಥಿಯ ಶುಭ ಘಳಿಗೆಯಲ್ಲಿ ನಾಮಪತ್ರ ಸಲ್ಲಿಕೆಗೆ ನಿರ್ಧಾರಿಸಿದ್ದಾರೆ. ನಾಳೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಂದಲ್ಲೂ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಒಟ್ಟಿನಲ್ಲಿ ನಾಳೆ ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಕೆ ಮಾಡಲಿದ್ದು, ಯಾರು ಹೆಚ್ಚು ಶಕ್ತಿ ಪ್ರದರ್ಶನ ಮಾಡತ್ತಾರೆ ಕಾಯ್ದು ನೋಡಬೇಕಿದೆ.