ಉ.ಕ ಸುದ್ದಿಜಾಲ ಬೆಳಗಾವಿ :

ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ಘಟನೆ ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆಯಾದ ವ್ಯಕ್ತಿ.

ಕೆಲಸದ ನಿಮಿತ್ತವಾಗಿ ನಿನ್ನೆ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ಮೋಹನ ಕೆಲಸ ಮುಗಿಸಿಕೊಂಡು ಮರಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.

ಮನಬಂದಂತೆ ಮಾರಕಾಸ್ತ್ರಗಳಿಂದ ಮೋಹನ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಕ್ತದಲ್ಲಿ ಮಡುವಿನಲ್ಲಿ ಬಿದ್ದಿದ್ದ ಮೋಹನ್ ಬೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಮೋಹನ.

ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆಯ ಶವಗಾರಕಕ್ಕೆ ಮೃತದೇಹ ರವಾನೆ ಮಾಡಲಾಗಿದೆ‌. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಗ್ರಾಮೀಣ ಪೊಲೀಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.