ಉ.ಕ ಸುದ್ದಿಜಾಲ ಬೆಳಗಾವಿ :
ಮಹಾರಾಷ್ಟ್ರದ ಕೊಂಕಣಭಾಗದಲ್ಲಿ ಅತಿಯಾದ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯಾದ್ಯಂತ ಮುಂದುವರೆದ ಮಳೆರಾಯನ ಅಬ್ಬರ ಜೋರಾಗಿದ್ದು ನದಿ ತೀರದ ಜನರಲ್ಲಿ ಆತಂಕ ಎದುರಾಗಿದೆ.
ಬೆಳಗಾಬಿ ಜಿಲ್ಲೆಯಾದ್ಯಂತ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ ಹಿನ್ನಲೆ ನಾಳೆ ಮತ್ತು ನಾಡಿದ್ದು ಆರು ತಾಲೂಕಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೋರಡಿಸೊದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಆದೇಶ ಹೋರಡಿಸಿದ್ದಾರೆ.
ಜುಲೈ 25 ಮತ್ತು 26ರಂದು ರಜೆ ಘೋಷಿಸಿ ಬೆಳಗಾವಿ ಡಿಸಿ ಆದೇಶ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಆದೇಶ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ.
ಸರ್ಕಾರಿ, ಅನುದಾನಿತ ಅನುದಾನ ರಹಿತ, ಪ್ರಾಥಮಿಕ ಪ್ರೌಢ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಬೆಳಗಾವಿ, ಬೈಲಹೊಂಗಲ, ಕಿತ್ತೂರು ಖಾನಪೂರ ತಾಲ್ಲೂಕಿನಲ್ಲಿ ಮಾತ್ರ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೋರಡಿಸಲಾಗಿದೆ.
